ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ. ಹೀಗಂತ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಸಭೆ ಮುಗಿಸಿ ತೆರಳಿದ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ. ಸಭೆ ನಂತರ ಪ್ರತಿಕ್ರಿಯೆಗೆ ಸಿಎಂ ಕುಮಾರಸ್ವಾಮಿ ನಿರಾಕರಿಸಿದರು.ಮಾಧ್ಯಮಗಳ ಮೇಲೆ ಮತ್ತೆ ಗರಂ ಆದ ಸಿಎಂ ಕುಮಾರಸ್ವಾಮಿ, ನಿಮ್ಮಲ್ಲಿನ ಚರ್ಚೆ, ಸುದ್ದಿಗಳಿಂದ ನಾನು ನಿಮಗೆ ಬಹಿಷ್ಕಾರ ಹಾಕಿದ್ದೇನೆ. ನಾನು ಮಾಧ್ಯಮಗಳಿಗೆ ಬಹಿಷ್ಕಾರ ಹಾಕಿದ್ದೇನೆ. (ಐ ಆಮ್ ಬಾಯ್ಕಟಿಂಗ್ ಯುವರ್ ಸೆಲ್ಫ್ ) ಎಂದು ತೆರಳಿದರು.