ಸಿಎಂ ಬೊಮ್ಮಾಯಿ ಅವರಿಗೆ ತಮ್ಮ ಸಂಪುಟ ಮತ್ತು ಪಕ್ಷದ ಮೇಲೆ ನಿಯಂತ್ರಣವಿಲ್ಲ. ಸರ್ಕಾರವನ್ನೇ ಸಂಘ ಪರಿವಾರಕ್ಕೆ ಅಡವಿಟ್ಟಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ʼಬೊಮ್ಮಾಯಿ ಜನರ ಗಮನವನ್ನು ಬೇರೆಡೆ ಸೆಳೆದು, ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸರ್ಕಾರವನ್ನು ಸಂಘ ಪರಿವಾರಕ್ಕೆ ಹೊರ ಗುತ್ತಿಗೆಗೆ ನೀಡಿದ್ದಾರೆ. ಅಲ್ಲಿರುವ ಕೆಲವು ಪುಂಡರ ಕೈಗೆ ಅಧಿಕಾರ ನೀಡಿರುವಂತೆ ಕಾಣುತ್ತಿದೆ. ಸರ್ಕಾರವನ್ನು ಸಂಘ ಪರಿವಾರಕ್ಕೆ ಅಡವಿಟ್ಟರೆ ಕುರ್ಚಿ ಉಳಿಸಿಕೊಳ್ಳಬಹುದು ಎಂದು ಬೊಮ್ಮಾಯಿ ಕನಸು ಕಾಣುತ್ತಿದ್ದಾರೆ