ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗ್ರಾಮವಾಸ್ತವ್ಯಕ್ಕೆ ಮತ್ತೊಂದು ವಿಘ್ನ ಎದುರಾಗಿದೆ. ಹೀಗಾಗಿ ದಿಢೀರ್ ಆಗಿ ಗ್ರಾಮ ವಾಸ್ತವ್ಯ ರದ್ದುಗೊಂಡಿದೆ.ಹೈದ್ರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸಿಎಂ ಹಮ್ಮಿಕೊಂಡಿರುವ ಗ್ರಾಮ ವಾಸ್ತವ್ಯಕ್ಕೆ ಮತ್ತೊಂದು ವಿಘ್ನ ಎದುರಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಮೊದಲ ಗ್ರಾಮ ವಾಸ್ತವ್ಯ ನಡೆಯಿತು. ಆದರೆ ಕಲಬುರಗಿ ಜಿಲ್ಲೆಯ ಹೇರೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಗ್ರಾಮ ವಾಸ್ತವ್ಯ ರದ್ದುಗೊಂಡಿದೆ.ಭಾರೀ ಮಳೆಯಿಂದಾಗಿ ಗ್ರಾಮ ವಾಸ್ತವ್ಯವನ್ನು ಮುಂದೂಡಲಾಗಿದೆ. ಬೃಹತ್ ವೇದಿಕೆ, ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಂಡಿದ್ದರು. ಆದರೂ ತಡರಾತ್ರಿ ಸುರಿದ ಧಾರಾಕಾರ