ಬೆಂಗಳೂರು : 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆ ಮಲ್ಲೇಶ್ವರಂ ಸರ್ಕಾರಿ ಕಾಲೇಜು ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.ಧ್ವಜಾರೋಹಣದ ವೇಳೆ ಸಚಿವ ಅಶ್ವಥ್ ನಾರಾಯಣ್ ಉಪಸ್ಥಿತರಿದ್ದರು. ಗಾಯಕಿ ಮಂಗ್ಲಿ ಮತ್ತು ಗಾಯಕರ ತಂಡದಿಂದ ದೇಶಭಕ್ತಿ ಗೀತೆಗಳನ್ನು ಹಾಡಲಾಯಿತು. ಧ್ವಜಾರೋಹಣದ ಬಳಿಕ ಮಾತಾಡಿದ ಸಿಎಂ, ದೇಶದ ಸ್ವಾತಂತ್ರ್ಯವನ್ನು ಸಂಭ್ರಮಿಸುವ ಕಾಲ ಇದು. ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟವರನ್ನು ನೆನೆಯಬೇಕಾದ ದಿನ.1824ರಲ್ಲಿ ಕರ್ನಾಟಕದಲ್ಲೇ ಸ್ವಾತಂತ್ರ್ಯದ ಕಿಚ್ಚು ಮೊಳಗಿತ್ತು