ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ 50 ಲಕ್ಷ ರೂ. ಗಳ ಅನುದಾನವನ್ನು ಶಾಸಕಿಯೊಬ್ಬರು ನೀಡಿದ್ದಾರೆ. ಕಾರವಾರ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ `ಸಿಎಂ ಕೊವಿಡ್-19 ರಿಲೀಫ್ ಫಂಡ್ಗೆ ಅನುದಾನ ನೀಡಿದ್ದಾರೆ. ಈ ಕುರಿತು ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಈಗಾಗಲೇ ಕೋವಿಡ್-19 ಸಾಂಕ್ರಾಮಿಕ ಖಾಯಿಲೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿದೆ.ರಾಜ್ಯದಲ್ಲೂ ಈ ವೈರಸ್ ಹರಡದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಕರ್ನಾಟಕ ಸರಕಾರ ಅವಿರತ ಪ್ರಯತ್ನ ನಡೆಸುತ್ತಿದೆ.