ಬೆಂಗಳೂರು: ನಗರದ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಇಂದು ಜೆಡಿಎಸ್ ನಾಯಕರು ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ಸೇರಲಿದ್ದಾರೆ.ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯುವ ಹಿನ್ನಲೆಯಲ್ಲಿ ಪಕ್ಷದ ಶಾಸಕರು, ಸಚಿವ ಸ್ಥಾನಕ್ಕಾಗಿ ಬಂಡಾಯವೇಳದಂತೆ, ಸರ್ಕಾರದ ವಿರುದ್ಧ ಹೋಗದಂತೆ ಪಾಠ ಹೇಳಲು ಕುಮಾರಸ್ವಾಮಿ ತುರ್ತು ಸಭೆ ಕರೆದಿದ್ದಾರೆ ಎನ್ನಲಾಗಿದೆ.ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರ ಸೂಚನೆಯಂತೆ ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ. ಸಚಿವ ಸಂಪುಟ ವಿಸ್ತರಣೆ ಸಂದರ್ಭ ಜೆಡಿಎಸ್ ನ