ಮೈಸೂರು : ಸಿಎಂ ಕುಮಾರಸ್ವಾಮಿಯನ್ನು ಕ್ಲರ್ಕ್ ಅಂತ ಕರೆದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದೀಗ ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕರ್ನಾಟಕದಲ್ಲಿ ಜೆಡಿಎಸ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ನಂತೆ ನಡೆಸಿಕೊಳ್ಳುತ್ತಿದೆ ಎಂದು ನನಗೆ ಅನ್ನಿಸುತ್ತದೆ ಎಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಸಮಾವೇಶದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿಯವರು ಹೇಳಿದ್ದರು. ಈ ಬಗ್ಗೆ ಇದೀಗ ಪ್ರತಿಕ್ರಿಯೆ