ಬೆಂಗಳೂರು: ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ಕಬ್ಬು ಬೆಳೆಗಾರರ ಜತೆ ಇಂದು ಸಿಎಂ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರು ಸಿಎಂ ಜತೆ ಮಾತುಕತೆ ನಡೆಸಲೇಬೇಕು ಎಂದು ಪಟ್ಟು ಹಿಡಿದಿದ್ದರು. ಕಬ್ಬಿಗೆ ದರ ನಿಗದಿ ಜತೆಗೆ ಸಿಎಂ ರೈತರ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೆ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದರು.ಇಂದು ಬೆಳಗಾವಿಯ ರೈತ ಮುಖಂಡರ ಜತೆಗೆ ಸಿಎಂ ಸಭೆ ನಡೆಸಲಿದ್ದಾರೆ. ಈಗಾಗಲೇ ಸಭೆಯಲ್ಲಿ ಪಾಲ್ಗೊಳ್ಳಲು ರೈತ