ಬೆಂಗಳೂರು: ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಜತೆಗೆ ಸಿಎಂ ಕುಮಾರಸ್ವಾಮಿ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ.ಪ್ರತೀ ಬಾರಿ ಬೆಂಗಳೂರಿನಲ್ಲಿ ನಡೆಯುವ ಏರ್ ಶೋ ಈ ಬಾರಿ ಲಕ್ನೋಗೆ ಸ್ಥಳಾಂತರಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿರುವ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ರಕ್ಷಣಾ ಸಚಿವರ ಜತೆ ಈ ಬಗ್ಗೆ ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ.ಸಭೆಯಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಏರ್ ಶೋವನ್ನು ಬೆಂಗಳೂರಿನಲ್ಲಿಯೇ ನಡೆಸಲು ಸಿಎಂ ಕುಮಾರಸ್ವಾಮಿ ಒತ್ತಾಯಿಸಲಿದ್ದಾರೆ.