ಬೆಂಗಳೂರು: ಸಂಪುಟ ವಿಸ್ತರಣೆ ಬೆನ್ನಲ್ಲೇ ನಾಯಕರ ಭಿನ್ನಮತ ಜೋರಾಗಿದ್ದು, ಕಾಂಗ್ರೆಸ್ ನಾಯಕರ ಭಿನ್ನಮತ ಶಮನಕ್ಕೆ ಸ್ವತಃ ಸಿಎಂ ಕುಮಾರಸ್ವಾಮಿ ಮುಂದಾಗಿದ್ದಾರೆ.ಕಾಂಗ್ರೆಸ್ ನ ಪ್ರಮುಖ ನಾಯಕ ಎಂಬಿ ಪಾಟೀಲ್ ಮನೆಗೆ ಭೇಟಿಯಿತ್ತ ಸಿಎಂ ಕುಮಾರಸ್ವಾಮಿ ಸಮಾಧಾನಪಡಿಸಲು ಮುಂದಾಗಿದ್ದಾರೆ. ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಎಂಬಿ ಪಾಟೀಲ್ ಬೆಂಬಲಿಗರು ವಿಜಯಪುರ ಬಂದ್ ಗೆ ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ನಿವಾಸಕ್ಕೆ ಸ್ವತಃ ಸಿಎಂ ಎಚ್ ಡಿಕೆ ಆಗಮಿಸಿ ಮಾತುಕತೆ