ಬೆಂಗಳೂರು: ಮತ್ತೆ ಸಮ್ಮಿಶ್ರ ಸರ್ಕಾರ ಬೀಳಿಸಲು ಆಪರೇಷನ್ ಕಮಲಕ್ಕೆ ತೆರೆಮರೆಯ ಪ್ರಯತ್ನ ನಡೆಸುತ್ತಿರುವ ಬಿಜೆಪಿಗೆ ಸೆಡ್ಡು ಹೊಡೆಯಲು ಸಿಎಂ ಕುಮಾರಸ್ವಾಮಿ ಭರ್ಜರಿ ತಂತ್ರವನ್ನೇ ಹೆಣೆದಿದ್ದಾರೆ.ಕಾಂಗ್ರೆಸ್ ನ ಅತೃಪ್ತ ಶಾಸಕರನ್ನೇ ಗುರಿಯಾಗಿಸಿ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ. ಇದಕ್ಕೆ ಪ್ರತಿಯಾಗಿ ಈಗ ಸಿಎಂ ಕುಮಾರಸ್ವಾಮಿ ಅಂತಹ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡಲು ಮುಂದಾಗಿದ್ದಾರೆ.ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ, ಶಾಸಕರು ಹೇಳಿದ ಅಧಿಕಾರಿಗಳ ವರ್ಗಾವಣೆಗೆ ಮನ್ನಣೆ ನೀಡುವುದು, ಜೆಡಿಎಸ್ ಶಾಸಕರ