ಬೆಂಗಳೂರು: ಬಜೆಟ್ ನಲ್ಲಿ ಕರಾವಳಿ, ಉತ್ತರ ಕರ್ನಾಟಕ ಭಾಗಗಳನ್ನು ನಿರ್ಲಕ್ಷಿಸಲಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ವಿಪಕ್ಷಗಳ ಪ್ರಶ್ನೆಗೆ ಉತ್ತರಿಸುವುದಾಗಿ ಹೇಳಿದ್ದಾರೆ. ಕರಾವಳಿ, ಉತ್ತರ ಕರ್ನಾಟಕ ಭಾಗಗಳನ್ನು ನಿರ್ಲಕ್ಷಿಸಿ ಕೇವಲ ಹೊಳೆನರಸೀಪುರ, ಹಾಸನ, ರಾಮನಗರಕ್ಕೆ ಬಂಪರ್ ಕೊಡುಗೆಗಳನ್ನು ನೀಡಿದ್ದಕ್ಕೆ ಸಿಎಂ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದು ಅಣ್ಣ ತಮ್ಮನ ಬಜೆಟ್ ಎಂದು ಸಿಎಂ ಮತ್ತು ಸಹೋದರ, ಸಚಿವ ರೇವಣ್ಣಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ