ಬೆಂಗಳೂರು : ಬಿಜೆಪಿಯವರು ತಾವೇ ಗಡಿ ದಾಟಿ ಉಗ್ರರ ಮೇಲೆ ದಾಳಿ ಮಾಡಿದವರಂತೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿರುವುದು ಅಶಾಂತಿಗೆ ಅವಕಾಶ ಮಾಡಿಕೊಟ್ಟ ಹಾಗೆ ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿರುವುದಕ್ಕೆ ಅವರ ವಿರುದ್ಧ ದೂರು ದಾಖಲಾಗಿದೆ. ಹೊನ್ನಾಪುರ ಗ್ರಾಮದ ನಿವಾಸಿ ಅನಿಲ್ ಕುಮಾರ್ ಸಬರ್ ವಾಲ್ ಎಂಬವರು, ಸಿಎಂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮುಂದೆಯೇ ಈ ರೀತಿ ಹೇಳಿಕೆ ನೀಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಪ್ರೇರಣೆ ನೀಡುತ್ತಿದ್ದಾರೆ ಎಂದು