ಬೆಂಗಳೂರು: ದೆಹಲಿಯಲ್ಲಿ ನಡೆಯಲಿರುವ ಸಂಸದರ ಸಭೆಗೆ ಸಿಎಂ ಕುಮಾರಸ್ವಾಮಿ ಇಂದೇ ದೆಹಲಿಗೆ ಪ್ರಯಾಣಿಸಲಿದ್ದಾರೆ. ನಾಳೆ ಸಭೆ ನಡೆಯುವುದಿದ್ದರೆ ಇಂದೇ ಏಕೆ ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎನ್ನುವುದಕ್ಕೆ ಉತ್ತರ ಸಿಕ್ಕಿದೆ.ಆಷಾಢ ಮುಗಿದ ಬಳಿಕ ರಾಜ್ಯ ಸಮ್ಮಿಶ್ರ ಸರ್ಕಾರದ ಸಂಪುಟ ವಿಸ್ತರಣೆ ಮಾಡಬೇಕಿದೆ. ಹೀಗಾಗಿ ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂದು ಯಾರಿಗೂ ನೋವಾಗದಂತೆ ನಾಜೂಕಾಗಿ ಕೆಲಸ ನಿರ್ವಹಿಸಬೇಕಾಗಿದೆ.ಹೀಗಾಗಿ ರಾಹುಲ್ ಗಾಂಧಿ ಜತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕುಮಾರಸ್ವಾಮಿ ಚರ್ಚೆ