ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲ ಬಾರಿಗೆ ಸಿಎಂ ಕುಮಾರಸ್ವಾಮಿ ತಮ್ಮ ಸ್ವಕ್ಷೇತ್ರ ಚನ್ನಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ.ಕುಮಾರಸ್ವಾಮಿ ಭೇಟಿ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ನೇತೃತ್ವದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.ಆಪ್ತರೊಂದಿಗೆ ಕಾಲಭೈರವೇಶ್ವರನ ಸನ್ನಿಧಿಗೆ ಭೇಟಿ ನೀಡಲಿರುವ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದಾರೆ.ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.