ಬೆಂಗಳೂರು : ಮಂಡ್ಯಗೆ 300 ಜನ ಕಳಿಸಿದೆ ರೇಡ್ ಮಾಡಿಸುತ್ತೀಯಾ? ಎಲ್ಲಿದ್ದೀಯಾಪ್ಪಾ ಬಾಲಕೃಷ್ಣ ಎಂದು ಸಿಎಂ ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆ ಮಖ್ಯಸ್ಥ ಬಾಲಕೃಷ್ಣ ಅವರಿಗೆ ಏಕವಚನದಲ್ಲಿ ಪ್ರಶ್ನಿಸಿ ಧಮ್ಕಿ ಹಾಕಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಹರಿಪ್ರಸಾದ್ ಪರ ನಗರದ ವಿದ್ಯಾಪೀಠ ಸರ್ಕಲ್ ನಲ್ಲಿ ಬಹಿರಂಗ ಪ್ರಚಾರ ಸಭೆ ಉದ್ದೇಶಿ ಮಾತನಾಡಿದ ಸಿಎಂ, ಕರ್ನಾಟಕದಲ್ಲಿ ಜನತೆಯ ವಿಶ್ವಾಸ ಗಳಿಸಿ ಆಡಳಿತ ನಡೆಸುತ್ತಿದ್ದು, ನಮ್ಮ ಜೊತೆ ಚೆಲ್ಲಾಟ ಆಡಬೇಡಿ