ದೇಶಕ್ಕೆ ಗಾಂಧಿ ಒಬ್ಬರೇ ಮಹಾತ್ಮ ಮತ್ತು ಪಿತಾಮಹ. ಯಾವುದೇ ಪ್ರಚಾರದ ಸಾಮಾಗ್ರಿ ಮತ್ತು ತಂತ್ರಜ್ಞಾನ ಇಲ್ಲದೆ ಕೇವಲ ಅಹಿಂಸೆ ಮತ್ತು ತಮ್ಮ ಬದುಕಿನ ಸರಳತೆಯಿಂದಲೇ ಮಹಾತ್ಮಗಾಂಧಿ ವಿಶ್ವದ ಮೂಲೆ ಮೂಲೆಗೆ ತಲುಪಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಮತ್ತು ಹಲವು ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಭವನದಲ್ಲಿ ನಡೆದ ಮಹಾತ್ಮ ಗಾಂಧಿ ಅವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಒಮ್ಮೆ ರೈಲಿನಲ್ಲಿ ಮೂರನೇ ದರ್ಜೆಯಲ್ಲಿ