ಬೆಂಗಳೂರು(ಆ.14): ಕೋವಿಡ್ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಮುಂದಿನ ಬಿಗಿ ಕ್ರಮಗಳನ್ನು ಕೈಗೊಳ್ಳುವ ಸಂಬಂಧ ಶನಿವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಪ್ರಸಕ್ತ ಮಾರ್ಗಸೂಚಿ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟುನಿಯಮಗಳನ್ನು ಪರಿಷ್ಕರಿಸುವ ಸಾಧ್ಯತೆಯಿದೆ. ಗಡಿ ಭಾಗದ ಜಿಲ್ಲೆಗಳ ಜತೆಗೆ ರಾಜಧಾನಿ ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿಯೂ ವಾರಾಂತ್ಯದ ಕಫ್ಮ್ರ್ಯ ಮತ್ತಿತರ ಕಠಿಣ ಕ್ರಮಗಳನ್ನು ಜಾರಿಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು