ರಾಜ್ಯ ಸರಕಾರಕ್ಕೆ ಮಾನ ಮರ್ಯಾದೆ ಇದ್ದರೆ, ರಾಜ್ಯದ ಜನರ ಪ್ರಾಣ ಕಾಪಾಡಬೇಕು ಎಂಬ ಜವಾಬ್ದಾರಿ ಇದ್ದರೆ ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು ಮತ್ತು ಸಂಪುಟದಿಂದ ವಜಾ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಈಶ್ವರಪ್ಪ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಿಯೋಗ ಮನವಿ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಂತೋಷ್ ಪಾಟೀಲ್ ಅವರ ಸಹೋದರ ನೀಡಿರುವ ದೂರಿನಲ್ಲಿ ತನ್ನ ಸಹೋದರನ