ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮೀಟರ್ ಇಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಯರ್ ಸ್ಥಾನಕ್ಕೆ ಆರು ಜನ ಆಕಾಂಕ್ಷಿಗಳಿದ್ದಾರೆ. ಅದರಲ್ಲಿ ನನ್ನ ಮತ್ತು ಸಚಿವ ರಾಮಲಿಂಗಾರೆಡ್ಡಿ ಬೆಂಬಲಿಗರು ಆಕಾಂಕ್ಷಿಗಳಿರುವುದು ನಿಜ. ಆದರೆ, ಪಕ್ಷದ ತೀರ್ಮಾನವೇ ಅಂತಿಮವಾಗಿದೆ ಎಂದು ತಿಳಿಸಿದ್ದಾರೆ. ಮೇಯರ್ ಮತ್ತು ಉಪಮೇಯರ್ ಚುನಾವಣೆ ಕುರಿತಂತೆ ಕಾಂಗ್ರೆಸ್ ಪಕ್ಷದ ಬಿಬಿಎಂಪಿ ಸದಸ್ಯರ