ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಿಳುನಾಡಿನ ಎಐಎಡಿಎಂಕೆ ನಾಯಕಿ ವಿ.ಕೆ. ಶಶಿಕಲಾಗೆ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎನ್ನುವ ವರದಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ. ಶಶಿಕಲಾಗೆ ಪ್ರತ್ಯೇಕ ಅಡುಗೆಮನೆ ಸೇರಿದಂತೆ ಇತರ ವಿಐಪಿ ಆತಿಥ್ಯ ನೀಡಲಾಗುತ್ತಿದೆ ಎಂದು ಡಿಐಜಿ ರೂಪಾ ಮೌಡ್ಗಿಲ್ ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ವರದಿ ಸಲ್ಲಿಕೆಯಿಂದ ಡಿಐಜಿ ರೂಪಾ ಮತ್ತು ಡಿಜಿ ಸತ್ಯನಾರಾಯಣರಾವ್ ಮಧ್ಯೆ ಭಾರಿ ತಿಕ್ಕಾಟ ಆರಂಭವಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲು