ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮಧ್ಯೆ ಮನಸ್ತಾಪವಿದೆ ಎನ್ನುವ ವರದಿಗಳಲ್ಲಿ ಸತ್ಯಾಂಶವಿಲ್ಲ. ಅವರಿಬ್ಬರು ಸಹೋದರರಂತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ವರದಿಗಳನ್ನು ತಳ್ಳಿಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಯಾತ್ರೆ ರದ್ದುಗೊಳ್ಳಲು ಸಿಎಂ ಸಿದ್ದರಾಮಯ್ಯ ಮತ್ತು ಜಿ.ಪರಮೇಶ್ವರ್ ಮಧ್ಯದ ಮನಸ್ತಾಪವೇ ಕಾರಣ ಎನ್ನುವ ವರದಿಗಳು ಹರಡಿವೆ. ಆದರೆ. ಅಂತಹ ವರದಿಗಳಲ್ಲಿ ಸತ್ಯಾಂಶವಿಲ್ಲ ಎಂದು ತಿಳಿಸಿದ್ದಾರೆ. ನಾವೆಲ್ಲರು ದೆಹಲಿಯಿಂದ ಒಂದೇ ವಿಮಾನದಲ್ಲಿ ಬಂದಿದ್ದೇವೆ. ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ.