ಪ್ರತಿ ವರ್ಷದಂತೆ ನವೆಂಬರ್ 1ರಂದು ಪ್ರಪಂಚದಾದ್ಯಂತ ಇರುವ ಕನ್ನಡಿಗರೆಲ್ಲರು ಸಂಭ್ರಮಿಸುವ ದಿನ. 1956 ನವೆಂಬರ್ 1ರಂದು ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಮೈಸೂರು ರಾಜ್ಯವಾಗಿ ಘೋಷಣೆ ಮಾಡಲಾಯಿತು. ಮೈಸೂರು ರಾಜ್ಯವಾಗಿ ಘೋಷಣೆಯಾದ ಈ ಪರ್ವದಿಂದ ಸಂಕೇತವಾಗಿ ಅಂದಿನಿಂದ ಕನ್ನಡಿಗರೆಲ್ಲರೂ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ 67ನೇ ಕರ್ನಾಟಕ ರಾಜ್ಯೋತ್ಸವ