ಬೆಂಗಳೂರು: ಅಕ್ರಮ ಗಣಿಗಾರಿಕೆಯ ಹಳೆ ಪ್ರಕರಣಗಳಿಗೆ ರಾಜ್ಯ ಸರ್ಕಾರ ಮರುಜೀವ ನೀಡುತ್ತಿದ್ದು, ಹೀಗಾಗಿ ಬಿಜೆಪಿ ವಿರುದ್ಧ ಮತ್ತೊಂದು ಅಸ್ತ್ರ ಬಳಸಿಕೊಳ್ಳಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದ್ಯ ಎನ್ನುವ ಪ್ರಶ್ನೆ ಮೂಡಿದೆ. ಸಿಎಂ ಸೂಚನೆಯಂತೆ ಸಂಪುಟ ಉಪ ಸಮಿತಿ ಸಭೆ ನಡೆಸಿದ ಸಚಿವ ಹೆಚ್.ಕೆ.ಪಾಟೀಲ್, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ವಿಶೇಷ ಆಸಕ್ತಿ ತೋರಿದ್ದಾರೆ. ಈಗಾಗಲೇ ಗಾಲಿ ಜನಾರ್ದನ ರೆಡ್ಡಿ ಗದಗ ಜಿಲ್ಲೆಯ 7 ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದು, ರೆಡ್ಡಿಯನ್ನ ಮಟ್ಟಹಾಕಲು ಹೆಚ್.ಕೆ.ಪಾಟೀಲ್ ಮುಂದಾಗಿದ್ದಾರೆ.