Widgets Magazine

ನೂತನ ಸಚಿವರ ಖಾತೆ ಹಂಚಿಕೆ ಪಟ್ಟಿ ಸಿದ್ಧಪಡಿಸಿದ ಸಿಎಂ

ಬೆಂಗಳೂರು| pavithra| Last Modified ಸೋಮವಾರ, 10 ಫೆಬ್ರವರಿ 2020 (11:35 IST)
ಬೆಂಗಳೂರು : ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ಸಿದ್ಧವಾಗಿದೆ ಎಂಬುದಾಗಿ ತಿಳಿದುಬಂದಿದೆ.

ಬೈಎಲೆಕ್ಷನ್ ನಲ್ಲಿ ಗೆದ್ದ 10ಮಂದಿ ಶಾಸಕರು ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಅವರಿಗೆ ಇನ್ನೂ ಖಾತೆ ಹಂಚಿಕೆಯಾಗಿರಲಿಲ್ಲ.  ಆದರೆ ಇದೀಗ ಖಾತೆ ಹಂಚಿಕೆ ಪಟ್ಟಿ ಸಿದ್ಧಪಡಿಸಿದ ಸಿಎಂ ಬಿಎಸ್ ಯಡಿಯೂರಪ್ಪ ಪಟ್ಟಿಯೊಂದಿಗೆ ವಿಧಾನಸೌಧದತ್ತ ತೆರಳಿದ್ದಾರೆ ಎನ್ನಲಾಗಿದೆ.

 

ವಿಧಾನಸೌಧದ ಬಳಿ ಈ ಬಗ್ಗೆ ಸುದ್ದಿಗಾರರೊಂದಿಗೆ  ಮಾತನಾಡಿದ ಸಿಎಂ, ಈಗ ಖಾತೆ ಹಂಚಿಕೆ ಪಟ್ಟಿ ಸಿದ್ದವಾಗಿದ್ದು, ಈ ಖಾತೆ ಹಂಚಿಕೆ ಪಟ್ಟಿ ರಾಜ್ಯಪಾಲರಿಗೆ ಕಳಿಸುತ್ತೇನೆ ಎಂದು ಹೇಳಿದ್ದಾರೆ. ಹಾಗಾದರೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ವಿಚಾರ ಸದ್ಯದಲ್ಲೇ ತಿಳಿಯಲಿದೆ ಎನ್ನಲಾಗಿದೆ.

 
ಇದರಲ್ಲಿ ಇನ್ನಷ್ಟು ಓದಿ :