ಬೆಂಗಳೂರು : ಕೇಂದ್ರ ಸರ್ಕಾರವು ರಾಜ್ಯದ ಬಗ್ಗೆ ಮಲತಾಯಿ ಧೋರಣೆ ತೋರಿಸುತ್ತಿದೆ. ತೆರಿಗೆ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರ ಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ನೀಡದಿರುವುದು, ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ್ಯ ಮತ್ತು ವಿಳಂಬವನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಧರಣಿ ಸತ್ಯಾಗ್ರಹಕ್ಕೆ ನಾಡಿನ ಸಮಸ್ತ ಜನತೆಯ ಪರವಾಗಿ ನೀವೂ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು