ಬಿಜೆಪಿ ಚುನಾವಣೆ ಆಟದಲ್ಲಿ ಗೆಲ್ಲಲ್ಲೆಂದೆ ಆಟವಾಡುತ್ತಿದೆ. ಈ ವೇಳೆ ಜೆಡಿಎಸ್ ಪಕ್ಷಕ್ಕೆ ತನ್ನ ಆಟ ಆಡಲು ಅವಕಾಶ ನೀಡಬಾರದು ಎಂಬ ಉದ್ದೇಶವಿರುವ ಕಾರಣ ಬಿಜೆಪಿ ಜೆಡಿಎಸ್ ಪಕ್ಷದ ಜೊತೆಗೆ ಯಾವುದೇ ಕಾರಣಕ್ಕೂ ಕೈ ಜೋಡಿಸಲ್ಲ ಎಂದು ಮೈತ್ರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಬೆಂಗಳೂರಿನ ನಡೆದ ಖಾಸಗಿ ಸಮಾರಂಭದಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ. ನಾವು ಈ ವರ್ಷ 130 ಸ್ಥಾನ ಗೆಲ್ಲುತ್ತೇವೆ ಎಂದು