ರಾಜ್ಯ ಸರಕಾರ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿದೆ. ಆದರೆ ವಿರೋಧ ಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ ಅಂತ ಸಿಎಂ ದೂರಿದ್ದಾರೆ. ಇದೇ ವೇಳೆ ರಾಜ್ಯಪಾಲರ ಕ್ರಮದ ವಿರುದ್ಧ ಸಿಎಂ ಕಿಡಿಕಾರಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ನರೇಗಾ ಯೋಜನೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ 2000 ಕೋಟಿ ಬಂದಿಲ್ಲ. ಆದರೂ ವಿನಾಕಾರಣ ಸರಕಾರದ ವಿರುದ್ಧ ದೂರುತ್ತಿದ್ದಾರೆ ಎಂದರು.ರಾಜ್ಯದಲ್ಲಿ ಪರ್ಸೆಂಟೇಜ್ ವ್ಯವಸ್ಥೆ ಜಾರಿಗೆ ತಂದೋರು ಯಾರು ಎನ್ನೋದು ಎಲ್ರಿಗೂ ಗೊತ್ತಿದೆ. ರಾಜ್ಯಪಾಲರಿಗೆ ಈಗ ಜ್ಞಾನೋದಯವಾಗಿದೆ.