ರಾಜ್ಯ ಸರಕಾರ ರೈತರಲ್ಲಿ ನೆಮ್ಮದಿ ತರಲು ಸಾಲಮನ್ನಾ ಯೋಜನೆ ಜಾರಿಗೆ ತಂದಿದೆ. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಸಿಎಂ ಹೇಳಿದ್ದಾರೆ.ಸರಕಾರದ ಬೊಕ್ಕಸದಲ್ಲಿ ಸಾಕಷ್ಟು ಹಣವಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಸಾಲ ಮನ್ನಾದಿಂದ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಕೊರತೆಯಾಗಿದೆ ಎಂಬುದು ಕೇವಲ ಮಿಥ್ಯ. ರಾಜ್ಯ ಸರಕಾರದ ಚಾಲ್ತಿ ಖಾತೆಯಲ್ಲಿ 10 ಸಾವಿರ ಕೋಟಿ ರೂ.ಗಳಿಗೂ ಮಿಕ್ಕಿ ಮೊತ್ತವಿದೆ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡಲಾಗಿದೆ