ಮೈಸೂರು, ಚಾಮರಾಜನಗರ ಸಹಕಾರ ಬ್ಯಾಂಕ್ ಚುನಾವಣೆ ಮುಂದೂಡಲಾಗಿದೆ. ಈ ಮೂಲಕ ಜಿ.ಟಿ.ದೇವೇಗೌಡ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ರಾ ಎಂಬ ಅನುಮಾನ ಮೂಡಿದೆ. ಅಕ್ಟೋಬರ್ 4ರಂದು ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಚುನಾವಣೆ ಮುಂದೂಡಿ ಜಿಲ್ಲಾಧಿಕಾರಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.. ಈ ಮೂಲಕ ಸಹಕಾರ ಕ್ಷೇತ್ರದಲ್ಲಿ G.T.ದೇವೇಗೌಡರ ಹಿಡಿತ ತಪ್ಪಿಸಲು ಸಿಎಂ ಮಾಸ್ಟರ್ ಪ್ಲ್ಯಾನ್ ಮಾಡಿದ್ರಾ ಎಂಬ ಅನುಮಾನ ಮೂಡಿದೆ. ನಿಯಮಾವಳಿಗಳ ಪ್ರಕಾರ ಮತದಾರ ಪಟ್ಟಿಯನ್ನ ತಯಾರಿಸಿಲ್ಲ ಎಂದು ದೂರು ನೀಡಲಾಗಿತ್ತು..