ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಭಾನುವಾರ ವಿಧಾನಸೌಧ ಸಭಾಂಗಣದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು. 11-7-2024 ಕಾವೇರಿ ನೀರು ನಿಯಂತ್ರಣ ಸಮಿತಿಯ 3 ನೇ ಸಭೆ ನಡೆದು, ಜುಲೈ 12 ನೇ ದಿನಾಂಕದಿಂದ ಈ ತಿಂಗಳ ಕೊನೆಯವರೆಗೆ ಸುಮಾರು 20 ದಿನ ಪ್ರತೀ ದಿನ 1 tmc ಯಂತೆ 20 tmc ನೀರು ಬಿಡಲು ಆದೇಶಿಸಿದ್ದಾರೆ.