ಹೈಕಮಾಂಡ್ನೊಂದಿಗೆ ಕೆಲ ವಿಷಯಗಳ ಬಗ್ಗೆ ಚರ್ಚಿಸಲು ಆಗಮಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲು ನಿರ್ಧರಿಸಿರುವ ಜೆಡಿಎಸ್ ಪಕ್ಷದ ಏಳು ಬಂಡಾಯ ಶಾಸಕರನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪರಿಚಯಿಸುವುದು ಕೂಡಾ ಕಾರ್ಯಕ್ರಮವಾಗಿದೆ ಎಂದು ತಿಳಿಸಿದ್ದಾರೆ. ಖಾಲಿಯಾಗಿರುವ ಮೂರು ಸಚಿವ ಸ್ಥಾನಗಳನ್ನು ಭರ್ತಿ ಮಾಡುವುದು, ವಿಧಾನಪರಿಷತ್ಗೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಹೈಕಮಾಂಡ್ನೊಂದಿಗೆ ಚರ್ಚೆ ನಡೆಸುತ್ತೇನೆ ಎಂದರು. ಜೆಡಿಎಸ್ ಪಕ್ಷದ ಬಂಡಾಯ ಶಾಸಕರಾದ ಜಮೀರ್ ಆಹ್ಮದ್