ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್`ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 4,926 ಕೋಟಿ ರೂ. ಮೀಸರಿಸಿದ್ದು, ಗರ್ಭಿಣಿಯರು ಮತ್ತು ಬಾಣಂತಿಯರಿಗಾಗಿ ವಿಶೇಷ ಯೋಜನೆ ಜಾರಿಗೊಳಿಸಿದ್ದಾರೆ. ಮಾತೃಪೂರ್ಣ: ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗಾಗಿ ಮಾತೃಪೂರ್ಣ ಎಂಬ ಯೋಜನೆಯನ್ನ ಜಾರಿಗೊಳಿಸಲಾಗಿದ್ದು, ಯೋಜನೆಯಡಿ ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗಾಗಿ ಉಚಿತ ಬಿಸಿಯೂಟ ನೀಡಲಾಗುತ್ತದೆ. ಇದಕ್ಕಾಗಿ 302 ಕೋಟಿ ರೂ. ಮೀಸಲಿಡಲಾಗಿದೆ.ಎಲ್ಲ 30 ಜಿಲ್ಲೆಗಳಲ್ಲಿ ಸ್ತ್ರೀಶಕ್ತಿ ಸಂಘಗಳಿಂದ ಸವಿರುಚಿ ಸಂಚಾರಿ ಕ್ಯಾಂಟೀನ್ ಯೋಜನೆ ಜಾರಿ.