ಮೈಸೂರು: ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾ ಡಿರುವುದು ಅವರ ಸರ್ಕಾರ ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ.ಭ್ರಷ್ಟಾಚಾರ ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.