ದಿವಂಗತ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುವಾಗ ಸಿಬಿಐಗೆ ವಹಿಸಲು ಆಗುತ್ತಾ? ಎಂದು ಪ್ರಶ್ನಿಸಿದ ಅವರು, ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗಣಪತಿ ಆತ್ಮಹತ್ಯೆ ಪ್ರಕರಣದ ಬಗ್ಗೆ ಸಿಐಡಿ ವರದಿ ಕೊಟ್ಟಿದೆ. ಸುಪ್ರೀಂಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ಸಿಬಿಐಗೆ ವಹಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ಎಂ.ಕೆ.ಗಣಪತಿ ಆತ್ಮಹತ್ಯೆಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪಗಳಲ್ಲಿ ಸತ್ಯಾಂಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.