ಕಲಬುರ್ಗಿ: ವೀರಶೈವ ಲಿಂಗಾಯತ ಧರ್ಮದವರ ಮಧ್ಯೆ ಸಿಎಂ ಸಿದ್ದರಾಮಯ್ಯ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಕಲಬುರ್ಗಿಯಲ್ಲಿ ಮಾತನಾಡಿದ ಅವರು, ಧರ್ಮಗಳ ಮಧ್ಯೆ ಜಗಳ ಹಚ್ಚುವ ಮೂಲಕ ಯಡಿಯೂರಪ್ಪ ಅವರು ಸಿಎಂ ಆಗುವುದನ್ನು ತಪ್ಪಿಸುವ ಹುನ್ನಾರವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಇಲ್ಲಿ ಸಚಿವ ಎಂ.ಬಿ.ಪಾಟೀಲರನ್ನು ಹರಿಕೆಯ ಕುರಿ ಮಾಡಲಾಗಿದೆ. ಸಿದ್ದರಾಮಯ್ಯ ಮತ್ತೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಇದು ಈ ಜನ್ಮದಲ್ಲಿ