ವೀರಶೈವ ಪ್ರತ್ಯೇಕ ಲಿಂಗಾಯುತ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸೋದು ಸರಿಯಲ್ಲ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಲಿಂಗಾಯುತ ಸ್ವಾಮಿಗಳು ಮನವಿ ನೀಡಿದಾಗ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಸ್ವಾಭಾವಿಕ. ಆದರೆ. ಲಿಂಗಾಯುತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದ್ದಾರೆ. ಪರಸ್ಪರ ಹೊಂದಾಣಿಕೆಯಿಂದ ಮಾತ್ರ ಸಮಸ್ಯೆ ಬಗೆಹರಿಯಲು ಸಾಧ್ಯ.ಯಾವುದೇ ಸಮಸ್ಯೆಗೆ ಮಾತುಕತೆಯೇ ಪರಿಹಾರ ಎಂದು ಅಭಿಪ್ರಾಯ ಪಟ್ಟಿದ್ದಾರೆ.