ಸಿಎಂ ಸಿದ್ದರಾಮಯ್ಯ ಓರ್ವ ಬಚ್ಚಾ. ಲಜ್ಜಗೆಟ್ಟ ನಡುವಳಿಕೆಯ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿವರ್ತನಾ ಯಾತ್ರೆಗೆ ಜನರೇ ಬರುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ತಾಕತ್ತಿದ್ರೆ ಯಾತ್ರೆಯಲ್ಲಿ ಜನ ಸೇರಿರುವುದನ್ನು ಬಂದ ನೋಡಲಿ ಎಂದು ಸವಾಲ್ ಹಾಕಿದರು. ಪವಿತ್ರ ಸ್ಥಳವಾದ ಧರ್ಮಸ್ಥಳಕ್ಕೆ ಮಾಂಸ ತಿಂದು ಹೋಗುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ