ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಇಂದು ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಿ ಪೂಜೆಗೈದು ದೇವಿಯ ಆಶೀರ್ವಾದ ಪಡೆದರು. ತಂದೆ ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ ಎಂದು ತಿಳಿಸಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರ ಬದಲಾಯಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ.