ಇಡೀ ದೇಶದಲ್ಲಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಡವರ ಸಿಎಂ ಎನ್ನುವ ಹೆಗ್ಗಳಿಕೆಗೆ ಗುರಿಯಾಗಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಶ್ಲಾಘಿಸಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಜನಪ್ರಿಯತೆಯನ್ನು ಸಹಿಸದೆ ಅವರ ಮೇಲೆ ಕೇಂದ್ರ ಸರಕಾರದ ಆದಾಯ ತೆರಿಗೆ ಇಲಾಖೆ, ಸೇರಿದಂತೆ ವಿವಿಧ ದಾಳಿಗಳನ್ನು ನಡೆಸಲು ಪ್ರಯತ್ನಿಸುತ್ತಿದೆ ಎಂದರು. ಸಿದ್ದರಾಮಯ್ಯ ರಾಜ್ಯದ ಜನತೆಗೆ ಅನ್ನಭಾಗ್ಯ ಯೋಜನೆ ನೀಡಿದ ಅನ್ನದಾತ. ಬಡವರ, ದೀನದಲಿತೋದ್ಧಾರಕವಾಗಿದ್ದಾರೆ.