ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಕೊಲೆಗಡುಕ ಸಚಿವ ವಿನಯ್ ಕುಲ್ಕರ್ಣಿಗೆ ಸಿಎಂ ಸಿದ್ದರಾಮಯ್ಯ ರಕ್ಷಣೆ ನೀಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಾಕ್ಷ್ಯಗಳನ್ನು ನಾಶಪಡಿಸುವಲ್ಲಿ ತೊಡಗಿದೆ. ಇಂತಹ ಕೊಲೆಗಡುಕ ಸಚಿವರಿಗೆ ಸಿಎಂ ಬೆಂಬಲಿಸುತ್ತಿರುವುದು ನಾಚಿಕೆಗೇಡಿತನದ ಸಂಗತಿಯಾಗಿದೆ ಎಂದು ಗುಡುಗಿದ್ದಾರೆ. ಜಿಪಂ ಸದಸ್ಯ ಯೋಗೇಶ್ ಗೌಡ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ, ರಾಜ್ಯ