ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರನ್ನ ದಯವಿಟ್ಟು ಗೆಲ್ಲಿಸಬೇಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಮೈಸೂರಿನ ರಾಜೀವ್ನಗರದಲ್ಲಿ ನಡೆದ ಅಲ್ ಬದರ್ ಸರ್ಕಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ನರೇಂದ್ರ ಮೋದಿ ಪ್ರಧಾನಿಯಾಗಿ 9 ವರ್ಷಗಳಾಯಿತು. ಇಷ್ಟು ವರ್ಷದಲ್ಲಿ ಅವರು ಬರೀ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದೂ ಮುಸ್ಲಿಂ, ಹಿಜಬ್, ಹಲಾಲ್ ಕಟ್ ವಿಚಾರಗಳನ್ನ ಮುಂದಿಟ್ಟುಕೊಂಡು ಸಮಾಜದ