ವಿಪಕ್ಷಗಳ ವಿರುದ್ಧ ಮನಬಂದಂತೆ ಟೀಕಿಸುತ್ತಿರುವ ಸಿಎಂ ಸಿದ್ದರಾಮಯ್ಯ. ಮೊದ್ಲು ಬುರುಡೆ ಬಿಡುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಮನಬಂದಂತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ತಮ್ಮ ಸ್ಥಾನದ ಘನತೆ ಅರಿತು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಬೇಕು ಎಂದು ಕಿಡಿಕಾರಿದ್ದಾರೆ. ಪ್ರಧಾನಿ ಮೋದಿಯವರ ಬಗ್ಗೆ ಕೇವಲವಾಗಿ ಮಾತನಾಡುವುದು ಸರಿಯಲ್ಲ. ದೇಶದ ಅತ್ಯುನ್ನತ ಸ್ಥಾನದಲ್ಲಿರುವವರ