ಉಪಚುನಾವಣಾ ಪ್ರಚಾರ ರಂಗೇರುತ್ತಿದ್ದು ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ನಡೆಸಿದ್ದಾರೆ. ಅಭ್ಯರ್ಥಿ ಕಳಲೆ ಕೃಷ್ಣಮೂರ್ತಿ ಪರ ಪ್ರಚಾರ ನಡೆಸಿದ ಅವರು ತಾಲೂಕಿನ ಮೊತ್ತ, ಹುಚ್ಗಣಿ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವಂತೆ ಕೋರಿದರು. ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಗೀತಾ ಮಹಾದೇವ ಪ್ರಸಾದ್ ಪರ ಕೂಡಾ ಡಾ.ಯತೀಂದ್ರ ಮತಯಾಚನೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ