ಕಲ್ಬುರ್ಗಿ ಹಂತಕರನ್ನ ಹುಡುಕಾಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಗೌರಿ ಲಂಕೇಶ್ ಹತ್ಯೆಯಿಂದ ಮತ್ತೊಂದು ಸವಾಲು ಎದುರಾಗಿದೆ. ಹೀಗಾಗಿ, ಗೃಹ ಸಚಿವ ರಾಮಲಿಂಗಾರೆಡ್ಡಿ ಮತ್ತು ಡಿಜಿಪಿ ಆರ್.ಕೆ. ದತ್ತಾ ಅವರನ್ನ ಮನೆಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಹಂತರನ್ನ ಶೀಘ್ರ ಪತ್ತೆ ಹಚ್ಚುವಂತೆ ಖಡಕ್ ಸೂಚನೆ ಕೊಟ್ಟಿದ್ದಾರೆ.