ವಿಧಾನಸೌಧಧಲ್ಲಿ ವಿಪಕ್ಷಗಳು ಧರಣಿ ಮುಂದುವರಿಕೆಯಿಂದ ಸಿಡಿಮಿಡಿಗೊಂಡ ಸಿಎಂ ಸಿದ್ದರಾಮಯ್ಯ ವಿಪಕ್ಷಗಳು ನಕಲಿ ಡೈರಿ ಬಗ್ಗೆ ಚರ್ಚೆಗೆ ಒತ್ತಾಯಿಸಿ ಸಮಯ ವ್ಯರ್ಥಗೊಳಿಸುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದೊಂದು ರಾಜಕೀಯ ಸಂಚು. ವಿಪಕ್ಷಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವದು ಬಿಟ್ಟು ಕೆಟ್ಟ ರಾಜಕೀಯದಲ್ಲಿ ನಿರತವಾಗಿವೆ ಎಂದು ತಿರುಗೇಟು ನೀಡಿದರು. ನಮ್ಮ ಬಜೆಟ್ಗೆ ಜನರಿಂದ ಮಾಧ್ಯಮಗಳಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿರುವುದು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯವರು ಹತಾಷರಾಗಿದ್ದಾರೆ ಎಂದು ಲೇವಡಿ ಮಾಡಿದರು.