ಉತ್ತರಪ್ರದೇಶ ಸಿಎಂಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು| Rajesh patil| Last Modified ಶುಕ್ರವಾರ, 19 ಮೇ 2017 (19:14 IST)
ದಕ್ಷ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ಸಾವಿನ ಕುರಿತಂತೆ ತನಿಖೆ ನಡೆಸಿ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ್‌ಗೆ ಸಿಎಂ ಪತ್ರ ಬರೆದಿದ್ದಾರೆ.
ಅನುರಾಗ್ ತಿವಾರಿ ಅವರ ಸಾವಿನ ಹಿಂದಿನ ಕಾರಣಗಳ ಬಗ್ಗೆ ದಕ್ಷ ತಂಡದಿಂದ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಹೊರಗೆ ತರುವುದು ಅಗತ್ಯವಾಗಿದೆ. ರಾಜ್ಯ ಸರಕಾರ ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದವಿದೆ ಎಂದು ತಿಳಿಸಿದ್ದಾರೆ.
ನಾಳೆ ಉತ್ತರಪ್ರದೇಶದಿಂದ ತನಿಖಾ ತಂಡ ಬೆಂಗಳೂರಿಗೆ ಆಗಮಿಸಿದ್ದು, ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.


ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಅನುರಾಗ್ ತಿವಾರಿ ತರಬೇತಿಗೆಂದು ಲಕ್ನೋಗೆ ತೆರಳಿದ್ದಾಗ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಇದರಲ್ಲಿ ಇನ್ನಷ್ಟು ಓದಿ :