ಬೆಂಗಳೂರು: ಸಿಎಂ ಸಿದ್ದರಾಮಯ್ಯ ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡಿಸಲಿದ್ದು, ಚುನಾವಣೆಗೆ ಮೊದಲು ಮಂಡಿಸಲಿರುವ ಬಜೆಟ್ ಆದ್ದರಿಂದ ನಿರೀಕ್ಷೆಗಳು ಹೆಚ್ಚಿವೆ. 13 ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ವರ್ಗದವರಿಗೂ ಕೊಡುಗೆ ನೀಡುವ ನಿರೀಕ್ಷೆಯಿದೆ. ಅದರಲ್ಲೂ ರೈತರ ಸಂಪೂರ್ಣ ಸಾಲ ಮನ್ನಾ ಮಾಡಬಹುದು ನಿರೀಕ್ಷಿಸಲಾಗಿದೆ.ಇನ್ನು ಹೆಚ್ಚುವರಿ ಸಾಲದ ಹೊರೆ ತಪ್ಪಿಸಲು ವಿವಿಧ ಇಲಾಖೆಗಳಿಗೆ ನೀಡುವ ಅನುದಾನಕ್ಕೆ ಕತ್ತರಿ ಬೀಳುವ ಸಾಧ್ಯತೆಯಿದೆ. ಕೊಟ್ಟರೂ ಪ್ರಮಾಣ