ಬೆಂಗಳೂರು: ರೈತರ ಸಾಲಮನ್ನಾ ವಿಚಾರವಾಗಿ ವಿಪಕ್ಷ ನಾಯಕ ಈಶ್ವರಪ್ಪ ಮತ್ತು ಸಿಎಂ ಸಿದ್ಧರಾಮಯ್ಯ ನಡುವೆ ಸದನದಲ್ಲಿ ಜೋರಾದ ಮಾತಿನ ಚಕಮಕಿಗೆ ಕಾರಣವಾಯ್ತು. ಬರ ಕುರಿತ ಚರ್ಚೆಯ ಸಂದರ್ಭದಲ್ಲಿ ಸಾಲ ಮನ್ನಾ ವಿಷಯ ಪ್ರಸ್ತಾಪಿಸಿದ ಈಶ್ವರಪ್ಪ ರಾಜ್ಯದಲ್ಲಿ ಸಾಲಮನ್ನಾ ಮಾಡದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಧ್ಯಪ್ರದೇಶ, ಉತ್ತರಪ್ರದೇಶದಲ್ಲಿ ಸಾಲ ಮನ್ನಾ ಮಾಡಲಾಗಿದೆ. ನಮ್ಮ ರಾಜ್ಯದಲ್ಲಿ ಮಾತ್ರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿರುವುದೇಕೆ ಎಂದು ಪ್ರಶ್ನಿಸಿದರು.ತಕ್ಷಣ ಎದ್ದು ನಿಂತ