ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದಂತೇ ಹೈಕಮಾಂಡ್ ನಿಂದ ಸೂಚನೆ ಬಂದಿದೆ.ಸಿದ್ದರಾಮಯ್ಯ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದು ಬೇಡ. ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿ ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಮೂಲಕ ಸ್ಪಷ್ಟ ಸಂದೇಶ ರವಾನಿಸಿದೆ.ಈ ವಿಚಾರವನ್ನು ಇದೀಗ ವೇಣುಗೋಪಾಲ್ ಕೂಡಾ ಸಿಎಂ ಸಿದ್ದರಾಮಯ್ಯಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಚಿಂತನೆ ನಡೆಸಿದ್ದ